ಫೋರಂ ಆಫ್ ವುಮೆನ್ ಎಂಟರ್ಪ್ರೈಸಸ್ ಸಂಸ್ಥೆಯಿಂದ ಮಹಿಳಾ ದಿನಾಚರಣೆ ಆಚರಿಸಲಾಯಿತು. ಬೆಂಗಳೂರಿನ ಕಾಸಿಯಾ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 8 ಜನ ಸಾಧಕಿಯರನ್ನ ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ FOWE ಅಧ್ಯಕ್ಷೆ ರೂಪಾರಾಣಿ ಮಾತನಾಡಿ, ಕೊರೊನಾ ಸಮಯದಲ್ಲಿ ಹಲವಾರು ಮಹಿಳೆಯರು ಕೆಲಸ ಕಳೆದುಕೊಂಡು ಹಳ್ಳಿ ಸೇರಿದ್ದಾರೆ. ಅಂತಹ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಅರಿವು ಮೂಡಿಸ್ತಿದ್ದೇವೆ ಎಂದ್ರು.